ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಲ್ಲಿ ಅನ್ನಭಾಗ್ಯ ಯೋಜನೆಯ ಸಹ ಒಂದಾಗಿದ್ದು ಈ ಯೋಜನೆಯ ಅಡಿಯಲ್ಲಿ 5 ಕೆಜಿ ಅಕ್ಕಿಯನ್ನು ಹಾಗೂ ಐದು ಕೆಜಿ ಅಕ್ಕಿಗೆ ಬದಲಾಗಿ ಹಣವನ್ನು ನೀಡಲು ರಾಜ್ಯ ಸರ್ಕಾರ ನಿಮಗೆ ತಿಳಿಸಲಾಗಿದೆ. ಅದರಂತೆ ಈಗ ರಾಜ್ಯ ಸರ್ಕಾರವು ಜುಲೈ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು , ಈ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದಿಷ್ಟು ತಾಂತ್ರಿಕ ದೋಷಗಳು ಉಂಟಾಗಿರುವುದನ್ನು ಕಾಣಬಹುದಾಗಿದೆ. ಅದರಂತೆ ಈಗ ಯಾವೆಲ್ಲ ದೋಷಗಳು ಸಂಭವಿಸಿದೆ ಎಂಬುದರ ಮಾಹಿತಿಯನ್ನು ತಿಳಿಸಲಾಗುತ್ತದೆ.
ಡಿ ಬಿ ಟಿ ಮೂಲಕ ಹಣ ವರ್ಗಾವಣೆ :
ರಾಜ್ಯ ಸರ್ಕಾರವು ಹಕ್ಕಿ ಸಿಗುವವರೆಗೂ ಜುಲೈ ತಿಂಗಳಿನಿಂದ ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಪಡಿತರ ಚೀಟಿಯನ್ನು ಹೊಂದಿದಂತಹ ಫಲಾನುಭವಿಗಳಿಗೆ ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡುವುದಾಗಿ ನಿರ್ಧರಿಸಿದೆ. ಮೈಸೂರು ಹಾಗೂ ಕೋಲಾರ ಜಿಲ್ಲೆಯ ಫಲಾನುಭವಿಗಳಿಗೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ದಿನವೇ ಹಣವನ್ನು ರಾಜ್ಯ ಸರ್ಕಾರವು ವರ್ಗಾವಣೆ ಮಾಡಿತ್ತು. ಯಾದಗಿರಿ ,ಚಿತ್ರದುರ್ಗ, ದಾವಣಗೆರೆ, ಧಾರವಾಡ, ಕೊಪ್ಪಳ ಜಿಲ್ಲೆಗಳ ಪಡಿತರ ಚೀಟಿಯನ್ನು ಹೊಂದಿದಂತಹ 49 ಲಕ್ಷ ಫಲಾನುಭವಿಗಳ ಖಾತೆಗೆ ರಾಜ್ಯ ಸರ್ಕಾರವು 80 ಕೋಟಿ ರೂಪಾಯಿಗಳನ್ನು ಡಿಬಿಟಿ ಮೂಲಕ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಎರಡನೇ ಹಂತದಲ್ಲಿ ಹಣವನ್ನು ರಾಜ್ಯ ಸರ್ಕಾರ ಜಮಾ ಮಾಡಿದೆ. ಆದರೆ ರಾಜ್ಯ ಸರ್ಕಾರ ಇನ್ನುಳಿದಂತಹ ಜಿಲ್ಲೆಗಳಲ್ಲಿರುವ ಫಲಾನುಭವಿಗಳಿಗೆ ಹಣ ವರ್ಗಾವಣೆ ಆಗಿಲ್ಲ ಎಂಬ ಮಾಹಿತಿಯ ಬಗ್ಗೆ ಕುರಿತು ಈಗ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ.
ಉಳಿದ ಜಿಲ್ಲೆಗಳಿಗೆ ಹಣ ವರ್ಗಾವಣೆ :
ರಾಜ್ಯ ಸರ್ಕಾರವು ಮುಂದಿನ ನಾಲ್ಕು ದಿನದ ಒಳಗಾಗಿ ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ ,ಗದಗ, ಹಾಸನ, ವಿಜಯಪುರ, ಬಳ್ಳಾರಿ, ಬೀದರ್ ಕಲಬುರ್ಗಿ, ಬೆಳಗಾವಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಇರುವಂತಹ ಪಡಿತರ ಚೀಟಿದಾರರಿಗೆ ನೇರವಾಗಿ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಮಾಹಿತಿಯನ್ನು ನೀಡಿದೆ. ಆದರೆ ಇದಕ್ಕಾಗಿ ಇನ್ನೂ ರಾಜ್ಯ ಸರ್ಕಾರ ಯಾವುದೇ ಅರ್ಜಿಯನ್ನು ಆಹ್ವಾನ ಮಾಡಿಲ್ಲ ಎಂದು ಹೇಳಿದ್ದು ಪಡಿತರ ಚೀಟಿಯಲ್ಲಿ ಮುಖ್ಯಸ್ಥರಾಗಿರುವ ಆಧಾರ್ ಸಂಖ್ಯೆ ಅವರ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗಿದೆ ಎಂಬುದರ ಮಾಹಿತಿಯನ್ನು ಖಚಿತಪಡಿಸಿಕೊಳ್ಳಿ ಆಗ ಮಾತ್ರ ಡಿ ಬಿ ಟಿ ಮೂಲಕ ಅರ್ಜಿ ಆಹ್ವಾನಿಸಿದ ಮೇಲೆ ಹಣ ವರ್ಗಾವಣೆ ಆಗಲಿದೆ ಎಂದು ತಿಳಿಸಲಾಗಿದೆ.
ಇದನ್ನು ಓದಿ : BPL ಕಾರ್ಡ್ ಇದ್ದವರಿಗೆ ಮತ್ತೊಂದು ಹೊಸ ಕಾರ್ಡ್! ಸರ್ಕಾರದಿಂದ ಹೊಸ ಯೋಜನೆ ಜಾರಿ
ಆಹಾರ ಇಲಾಖೆ ವೆಬ್ಸೈಟ್ :
ಪಡಿತರ ಚೀಟಿಯನ್ನು ಪಡೆದಂತಹ ಪಡಿತರ ಚೀಟಿದಾರರು ಅದರ ಪ್ರಯೋಜನವನ್ನು ಪಡೆದಿರುವುದರ ಬಗ್ಗೆ ತಮ್ಮ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬೇಕಾದರೆ ರಾಜ್ಯ ಸರ್ಕಾರದ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಹೋಗಿ ಅಲ್ಲಿ ತಮ್ಮ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದಾಗಿದೆ. ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಎಂದರೆ https://ahara.kar.nic.in/E. service ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಪಡಿತರ ಚೀಟಿದಾರರು ಡಿ ಬಿ ಟಿ ಮೂಲಕ ನಿಮಗೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಹಣ ವರ್ಗಾವಣೆ ಆಗಿದೆ ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೀಗೆ ರಾಜ್ಯ ಸರ್ಕಾರ ಜಾರಿಗೊಳಿಸಿದಂತಹ ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು ಡಿ ಬಿ ಟಿ ಮೂಲಕ ತಮ್ಮ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಆಗಿದೆಯೇ ಇಲ್ಲವೇ ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಹೀಗೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಸಹ ಶೇರ್ ಮಾಡಿ ಅವರು ಸಹ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಾಗಿದ್ದರೆ ಅವರು ಸಹ ಈ ಮಾಹಿತಿಯ ಮೂಲಕ ತಮ್ಮ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಿ ಧನ್ಯವಾದಗಳು.
ಇತರೆ ವಿಷಯಗಳು :
ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆಗೆ ಅವಕಾಶ! ಹೆಸರು ಬದಲಾವಣೆ ಹೇಗೆ ಮಾಡಿಕೊಳ್ಳುವುದು? ಇಲ್ಲಿದೆ ಸಂಪೂರ್ಣ ಮಾಹಿತಿ
ಮೋದಿಯಿಂದ ದೇಶದ ರೈತರಿಗೆ ಬಿಗ್ ಶಾಕ್..! ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ಇನ್ನಿಲ್ಲ