Thursday, June 13, 2024
HomeScholarshipSSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿದಿರುವ ವಿಷಯವೆಂದರೆ ಕರ್ನಾಟಕ ಸರ್ಕಾರವು ಅನೇಕ ವಿದ್ಯಾರ್ಥಿವೇತನಗಳ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರಂತೆ ಇದೀಗ ಮತ್ತೊಂದು ಹೊಸ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆ ವಿದ್ಯಾರ್ಥಿ ವೇತನಕ್ಕೆ ಹೇಗೆ ಅರ್ಜಿ ಸಲ್ಲಿಸಬೇಕು ಹಾಗೂ ಅದ್ಭುತ ಮಾನದಂಡಗಳು ಯಾವುವು ಜೊತೆಗೆ ಅಗತ್ಯವಿರುವ ದಾಖಲೆಗಳು ಯಾವುವು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Application Invitation for SSP Scholarship
Application Invitation for SSP Scholarship
Join WhatsApp Group Join Telegram Group

ಎಸ್ ಎಸ್ ಪಿ ವಿದ್ಯಾರ್ಥಿ ವೇತನ :

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯಕವಾಗುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಎಸ್ ಎಸ್ ಪಿ ವಿದ್ಯಾರ್ಥಿ ವೇತನವನ್ನು ಆರಂಭಿಸಿದೆ. ಹಲವಾರು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ನಿಂದ ವಿದ್ಯಾರ್ಥಿ ವೇತನವನ್ನು ಪಡೆದು ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಹಾಯಕವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬುದ್ಧಿವಂತರಾಗಿದ್ದರು ಸಹ ಆರ್ಥಿಕವಾಗಿ ಅವರು ಉನ್ನತ ಶಿಕ್ಷಣವನ್ನು ಪಡೆಯಲು ಆಗುತ್ತಿರಲಿಲ್ಲ ಹಾಗಾಗಿ ಅಂತಹ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸುವ ಸಲುವಾಗಿ ಆರ್ಥಿಕ ಸಹಾಯವನ್ನು ಕರ್ನಾಟಕ ಸರ್ಕಾರ ಒದಗಿಸುತ್ತಿದೆ.

ವಿದ್ಯಾರ್ಥಿ ವೇತನಕ್ಕೆ ಮಂಜುರಾತಿ ಮಾಡುವ ಇಲಾಖೆಗಳು :

ಕರ್ನಾಟಕ ಸರ್ಕಾರದ ಎಸ್ ಎಸ್ ಟಿ ವಿದ್ಯಾರ್ಥಿ ವೇತನಕ್ಕೆ ಮಂಜೂರಾತಿ ಮಾಡುವಂತಹ ಇಲಾಖೆಗಳೆಂದರೆ ಸಮಾಜ ಕಲ್ಯಾಣ ಇಲಾಖೆ ,ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಬುಡಕಟ್ಟು ಕಲ್ಯಾಣ ಇಲಾಖೆ, ನಿರ್ದಿಷ್ಟವಾಗಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಓಬಿಸಿ ಮತ್ತು ಈ ಬಿ ನಂತರ ಆರ್ಥಿಕವಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಈ ಯೋಜನೆ ಮೀಸಲಾಗಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ : ಕರ್ನಾಟಕ ಸರ್ಕಾರದ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಎಸ್ ಎಸ್ ಪಿ ವಿದ್ಯಾರ್ಥಿ ವೇತನದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. SSP ಕರ್ನಾಟಕ ವಿದ್ಯಾರ್ಥಿ ವೇತನದ ಅಧಿಕೃತ ವೆಬ್ಸೈಟ್ https://ssp.postmatric.karnataka.gov.in/ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದಿದ್ದರೆ ಅವರು ಈ ವಿದ್ಯಾರ್ಥಿ ವೇತನದ ಮೂಲಕ ಮುಂದಿನ ವಿದ್ಯಾಭ್ಯಾಸವನ್ನು ಪಡೆಯಬಹುದಾಗಿದೆ.

ಅರ್ಹತೆಗಳು :

ಕರ್ನಾಟಕ ಸರ್ಕಾರದ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳೆಂದರೆ, ಆರ್ಥಿಕವಾಗಿ ಹಿಂದುಳಿದ ವರ್ಗದವರಾಗಿರಬೇಕು ಅಭ್ಯರ್ಥಿಗಳು. ಎಸ್ಸಿ ಎಸ್ಟಿ ಒಬಿಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಾಗಿದ್ದು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹಿಂದುಳಿದ ಸಮುದಾಯದವರು ಅರ್ಜಿದಾರರಾಗಿರಬೇಕು. 11 ಅಥವಾ ಅದಕ್ಕಿಂತ ಹೆಚ್ಚಿನ ಯಾವುದೇ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರಬಹುದು. 30% ಮೀಸಲಾತಿಯನ್ನು ಬಾಲಕಿಯರಿಗೆ ನೀಡಲಾಗಿದ್ದು ಅಭ್ಯರ್ಥಿಯ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ 50% ಅಷ್ಟು ಅಂಕಗಳನ್ನು ಗಳಿಸಬೇಕು. ಅರ್ಜಿಯನ್ನು ಸಲ್ಲಿಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷಕ್ಕಿಂತ ಕಡಿಮೆ ಇರಬೇಕು. ವಿದ್ಯಾರ್ಥಿಗಳು ಕರ್ನಾಟಕದ ಖಾಯಂವಾಸಿ ಆಗಿರಬೇಕು.

ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅಗತ್ಯವಿರುವ ದಾಖಲೆಗಳು :

ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ವಿದ್ಯಾರ್ಥಿಗಳು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ, ಅಭ್ಯರ್ಥಿಯ ಎಸ್ ಎ ಟಿ ಎಸ್ ಐ ಡಿ ಸಂಖ್ಯೆ. ಪೋಷಕರು ಮತ್ತು ವಿದ್ಯಾರ್ಥಿಯ ಆಧಾರ್ ಕಾರ್ಡ್. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ,ಬ್ಯಾಂಕ್ ಪಾಸ್ ಬುಕ್,ಮೊಬೈಲ್ ನಂಬರ್ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.

ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :

ಕರ್ನಾಟಕ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ 20.10.2023 ಸಮಾಜ ಕಲ್ಯಾಣ ಇಲಾಖೆಗೆ ಹಾಗೂ 31.11.2023 ಅಲ್ಪಸಂಖ್ಯಾತರ ಇಲಾಖೆಗೆ ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ.

ಹೀಗೆ ಕರ್ನಾಟಕ ಸರ್ಕಾರವು ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುವುದರ ಮೂಲಕ ಉನ್ನತ ಶಿಕ್ಷಣವನ್ನು ಪಡೆಯಲು ಅವಕಾಶ ಕಲ್ಪಿಸುತ್ತಿದೆ. ಇದರಿಂದ ಸುಲಭವಾಗಿ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾಸವನ್ನು ಸಹ ಪಡೆಯಬಹುದಾಗಿದೆ ಹೀಗೆ ಈ ಮಾಹಿತಿಯನ್ನು ನಿಮ್ಮೆಲ್ಲ ಸ್ನೇಹಿತರು ಹಾಗೂ ಬಂಧು ಮಿತರಿಗೆ ಶೇರ್ ಮಾಡುವ ಮೂಲಕ ಅವರ ಮಕ್ಕಳು ಸಹ ಕರ್ನಾಟಕ ಸರ್ಕಾರದ ವಿದ್ಯಾರ್ಥಿ ವೇತನವನ್ನು ಪಡೆಯುವುದರ ಮೂಲಕ ಉನ್ನತ ಶಿಕ್ಷಣವನ್ನು ಪಡೆಯಲು ನೆರವಾಗಿ ಧನ್ಯವಾದಗಳು.

ಇತರೆ ವಿಷಯಗಳು :

ನಮ್ಮ ಸಾವಿನ ನಂತರ ಬ್ಯಾಂಕ್‌ನಲ್ಲಿ ಹಣ ಯಾರಿಗೆ ಸಿಗುತ್ತೆ ..?

ಪೋಷಕರ ಗಮನಕ್ಕೆ: ಮಕ್ಕಳಿಗೆ ಈ ದಾಖಲೆ ಇನ್ನು ಮುಂದೆ ಕಡ್ಡಾಯ! ಕೇಂದ್ರ ಸರ್ಕಾರ ತಿಳಿಸಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments