Saturday, July 27, 2024
HomeTrending Newsಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್!‌ ಇನ್ಮುಂದೆ ಮಾತೃಭಾಷೆಯಲ್ಲಿಯೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆ, ಸರ್ಕಾರದಿಂದ ಹೊಸ...

ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಗುಡ್‌ ನ್ಯೂಸ್!‌ ಇನ್ಮುಂದೆ ಮಾತೃಭಾಷೆಯಲ್ಲಿಯೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆ, ಸರ್ಕಾರದಿಂದ ಹೊಸ ಆದೇಶ.

ನಮಸ್ಕಾರ ಸ್ನೇಹಿತರೆ ಇವತ್ತಿನ ದಿನಮಾನಗಳಲ್ಲಿ ಹೆಚ್ಚಿನ ಜನರು ಇಂಗ್ಲಿಷ್ ಮಾಧ್ಯಮದಲ್ಲಿ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದು ಇಂಗ್ಲಿಷ್ ಮಾಧ್ಯಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಬರೆಯಬೇಕಾಗಿತ್ತು. ಇದರಿಂದ ಕನ್ನಡ ಮಾಧ್ಯಮದಲ್ಲಿ ಓದಿದವರು ಸಾಮಾನ್ಯವಾಗಿ ಅನೇಕ ಅವಕಾಶಗಳಿಂದ ವಂಚಿತರಾಗುತ್ತಿದ್ದರು. ಆದರೆ ಈಗ ಕೇಂದ್ರ ಸರ್ಕಾರವು ಕೆಲವೊಂದಿಷ್ಟು ಬದಲಾವಣೆಗಳನ್ನು ಮಾಡುವುದರ ಮೂಲಕ ಉತ್ತಮವಾದ ಜ್ಞಾನ ಹೊಂದಿರುವವರು ತಮ್ಮ ಮಾತೃಭಾಷೆಯಲ್ಲಿಯೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಆದೇಶವನ್ನು ಇನ್ನು ಕೆಲವೇ ದಿನಗಳಲ್ಲಿ ಹೊರಡಿಸಲಿದೆ. ಹೀಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡಿರುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ. (Competitive Examination in Regional Language )

Competitive Examination in Regional Language
Competitive Examination in Regional Language
Join WhatsApp Group Join Telegram Group

ಪ್ರಾದೇಶಿಕ ಭಾಷೆಗಳಲ್ಲಿಯೇ ಪರೀಕ್ಷೆ ಬರೆಯಬಹುದು :

ಕರ್ನಾಟಕದ ಉದ್ಯೋಗ ಆಕಾಂಕ್ಷಿಗಳಿಗೆ ಪ್ರಾದೇಶಿಕ ಭಾಷೆಗಳಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಿರುವುದು ಒಂದು ಸಿಹಿ ಸುದ್ದಿಯಾಗಿದೆ. ಕನ್ನಡದಲ್ಲಿಯೇ ಇನ್ನು ಮುಂದೆ ಕೇಂದ್ರ ಸರ್ಕಾರಿ ನೇಮಕಾತಿಗಳಾದಂತಹ ಎಸ್ ಎಸ್ ಸಿ, ಎಂ ಟಿ ಎಸ್, ಸಿಆರ್ಪಿಎಫ್ ಹಾಗೂ ವ್ಯಾಸಂಗ ವಾದಂತಹ ಸಿಬಿಎಸ್ಇ ಪರೀಕ್ಷೆಗಳನ್ನು ಬರೆಯಬಹುದಾಗಿದೆ. ಇದು ಒಂದು ರೀತಿಯಲ್ಲಿ ಕೇಂದ್ರ ಸರ್ಕಾರವು ಕನ್ನಡಿಗರಿಗೆ ನೀಡಿದಂತಹ ಗುಡ್ ನ್ಯೂಸ್ ಎಂದು ಹೇಳಿದರು ಸಹ ತಪ್ಪಾಗಲಾರದು.

ಇದನ್ನು ಓದಿ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ : ಚಿನ್ನ ಬೆಳ್ಳಿ ಕೊಳ್ಳಲು ಇಂದೇ ಸುವರ್ಣಾವಕಾಶ, ಇಂದೇ ಈ ಬೆಲೆಗೆ ಖರೀದಿ ಮಾಡಿ

13 ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ :

ಕೇಂದ್ರ ಸರ್ಕಾರವು ಇಂಗ್ಲೀಷ್ ಮಾಧ್ಯಮದ ಜೊತೆಗೆ ತಮ್ಮ ಮಾತೃಭಾಷೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಅವಕಾಶ ಕಲ್ಪಿಸಿ ಕೊಟ್ಟಿದೆ. ಅದರಂತೆ ಈಗ ಎಸ್ ಎಸ್ ಸಿ ಎ ಪರೀಕ್ಷೆ ಮತ್ತು ಸಿ ಎಚ್ ಎಸ್ ಎಲ್ ಈ ಪರೀಕ್ಷೆಗಳನ್ನು ಕೇಂದ್ರ ಸರ್ಕಾರವು ಹಿಂದಿ ಮತ್ತು ಇಂಗ್ಲಿಷ್ ಭಾಷೆಯ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿಯೂ ನಡೆಸಲು ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಅನುಮೋದಿಸಿದೆ. ಇದರಿಂದ ಅಭ್ಯರ್ಥಿಗಳು ತಮ್ಮ ಮಾತೃಭಾಷೆಯಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬಹುದಾಗಿದೆ.(Competitive exams can be written in regional language)

ಡಿ ಓ ಪಿ ಟಿ ಅನುಮೋದನೆಯ ಕಾರಣದಿಂದಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ ಮಲ್ಟಿ ಟಾಸ್ಕಿಂಗ್ ಸ್ಟಾಪ್ ಪರೀಕ್ಷೆಯನ್ನು ಈಗ ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಭಾರತೀಯ ಭಾಷೆಗಳಲ್ಲಿ ವಿದ್ಯಾರ್ಥಿಗಳು ಬರೆಯಲು ಅವಕಾಶ ನೀಡಿದಂತಾಗಿದೆ. ಇದರಿಂದಾಗಿ ಪ್ರಾದೇಶಿಕ ಭಾಷೆಯಲ್ಲಿ ವ್ಯಾಸಂಗ ಮಾಡಿದಂತಹ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ಉನ್ನತ ಹುದ್ದೆಗಳನ್ನು ಪಡೆಯಬಹುದಾಗಿದೆ. 13 ಪ್ರಾದೇಶಿಕ ಭಾಷೆಗಳಲ್ಲಿ ಕನ್ನಡ ಭಾಷೆಯು ಒಂದಾಗಿದ್ದು ಕನ್ನಡ ಭಾಷೆಯಲ್ಲಿಯೂ ಸಹ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ಹುದ್ದೆಗಳಿಗೆ ಪರೀಕ್ಷೆಯನ್ನು ಬರೆಯಬಹುದಾಗಿದೆ ಇದರಿಂದ ವಿದ್ಯಾರ್ಥಿಗಳು ಉನ್ನತ ಹುದ್ದೆಯನ್ನು ಕನ್ನಡ ಮಾಧ್ಯಮದಲ್ಲಿಗೆ ಓದಿ ತಲುಪಬಹುದಾಗಿದೆ.

ಕೇಂದ್ರ ಸರ್ಕಾರವು ಮಾಡಿದ ಈ ಆದೇಶವು ಹೆಚ್ಚು ಉಪಯೋಗವಾಗಲಿದ್ದು, ಇದು ಉತ್ತಮವಾದ ಜ್ಞಾನವನ್ನು ಹೊಂದಿದ್ದರು ಸಹ ವಿದ್ಯಾರ್ಥಿಗಳು ಭಾಷೆಯ ಕಾರಣದಿಂದಾಗಿ ಹಲವಾರು ಪರೀಕ್ಷೆಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಕೇಂದ್ರ ಸರ್ಕಾರವು ಮುಕ್ತತೆಯನ್ನು ಮಾಡಿರುವುದು ಒಂದು ರೀತಿಯಲ್ಲಿ ಖುಷಿಯ ತಂದಿದ್ದು ಅದರಲ್ಲಿಯೂ ಕನ್ನಡಿಗರಿಗೆ ಹೆಚ್ಚಿನ ಸಂತೋಷವನ್ನು ಮೂಡಿಸಲು ಕೇಂದ್ರ ಸರ್ಕಾರವು ಕಾರಣವಾಗಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಯಾರಾದರೂ ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ನಡೆಸುತ್ತಿದ್ದಾರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಅವರು ಕನ್ನಡದಲ್ಲಿಯೇ ಪರೀಕ್ಷೆಯನ್ನು ಬರೆಯಲು ಅನುವು ಮಾಡಿಕೊಡಿ ಧನ್ಯವಾದಗಳು.

ಇತರೆ ವಿಷಯಗಳು :

ಮಾನ್ಸೂನ್‌ನಲ್ಲಿ ರೈತರಿಗೆ ಬಂಫರ್‌ ಗಿಫ್ಟ್!‌ ಸರ್ಕಾರದಿಂದ ಈ ವರ್ಗದ ಜನರಿಗೆ ಉಚಿತವಾಗಿ ಕೊಳವೆಬಾವಿ ನಿರ್ಮಾಣ, ಯಾರಿಗೆಲ್ಲಾ ಈ ಅವಕಾಶ ಸಿಗುತ್ತೆ ಗೊತ್ತಾ?

ಕೂಡಲೇ ರಿಜಿಸ್ಟರ್ ಮಾಡಿಕೊಳ್ಳಿ ಗೃಹಲಕ್ಷ್ಮಿ ಯೋಜನೆಗೆ ಹೊಸ ಲಿಂಕ್ ಬಿಡುಗಡೆ ಮಾಡಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments