Thursday, June 13, 2024
HomeTrending Newsಉಚಿತ ಹೊಲಿಗೆ ಯಂತ್ರ ಅರ್ಜಿ ದಿನಾಂಕ ವಿಸ್ತರಣೆ ಕೂಡಲೇ ಅರ್ಜಿ ಸಲ್ಲಿಸಿ ಸಂಪೂರ್ಣ ಮಾಹಿತಿ ಇಲ್ಲಿದೆ

ಉಚಿತ ಹೊಲಿಗೆ ಯಂತ್ರ ಅರ್ಜಿ ದಿನಾಂಕ ವಿಸ್ತರಣೆ ಕೂಡಲೇ ಅರ್ಜಿ ಸಲ್ಲಿಸಿ ಸಂಪೂರ್ಣ ಮಾಹಿತಿ ಇಲ್ಲಿದೆ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಲ್ಲಿ ಈಗ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರವು ಎಲ್ಲಾ ಮಹಿಳೆಯರಿಗೆ ಅನುಕೂಲವಾಗುವಂತೆ ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಲ್ಲಿ ಈಗ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಸಹ ಜಾರಿಗೆ ತರಲು ನಿರ್ಧರಿಸಿದೆ. ಹಾಗಾದರೆ ಕೇಂದ್ರ ಸರ್ಕಾರದ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು, ಯಾವೆಲ್ಲ ದಾಖಲೆಗಳು ಹೊಂದಿರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Free Sewing Machine Plan
Free Sewing Machine Plan
Join WhatsApp Group Join Telegram Group

ಉಚಿತ ಹೊಲಿಗೆ ಯಂತ್ರ ಯೋಜನೆ :

ಮಹಿಳೆಯರನ್ನು ಸ್ವಾವಲಂಬಿಯಾಗಲು ಹಾಗೂ ಸ್ವಯಂ ಉದ್ಯೋಗವನ್ನು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ನೀಡುವುದರ ಜೊತೆಗೆ ಹೊಲಿಗೆ ಯಂತ್ರದ ತರಬೇತಿಯನ್ನು ಸಹ ನೀಡಲು ನಿರ್ಧರಿಸಿದೆ. ಉಚಿತ ಹೊಲಿಗೆ ಯಂತ್ರ ಯೋಜನೆಯ ಅಡಿಯಲ್ಲಿ ಮೊದಲನೆಯದಾಗಿ ಮಹಿಳೆಯರಿಗೆ ಒಂದು ತಿಂಗಳಲ್ಲಿ ಹೊಲಿಗೆ ಯಂತ್ರದ ಜ್ಞಾನವನ್ನು ಆನಂತರ ಉಚಿತ ಹೊಲಿಗೆ ಯಂತ್ರಗಳನ್ನು ಕೇಂದ್ರ ಸರ್ಕಾರ ವಿತರಿಸುತ್ತದೆ. ಹೀಗೆ ಮಹಿಳೆಯರು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳುವುದರ ಮೂಲಕ ಮನೆಯಲ್ಲಿಯೇ ಕುಳಿತು ಕೆಲಸ ಮಾಡಿ ತಮ್ಮ ಜೀವನಮಟ್ಟವನ್ನು ಹಾಗೂ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಉಚಿತ ಹೊಲಿಗೆ ಯಂತ್ರ ಯೋಜನೆಗಾಗಲೇ ಇದೀಗ ಅರ್ಜಿಯನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಹಾಗೂ ಗ್ರಾಮ ಪಂಚಾಯಿತಿನಲ್ಲಿ ಅರ್ಜಿಗಳನ್ನು ಭರ್ತಿ ಮಾಡುವುದರ ಮೂಲಕ ಮಹಿಳೆಯರು ಅರ್ಜಿಯನ್ನು ಉಚಿತ ಹೊಲಿಗೆ ಯಂತ್ರ ಯೋಜನೆಗೆ ಸಲ್ಲಿಸಬಹುದಾಗಿದೆ. ಜಿಲ್ಲಾ ಪಂಚಾಯಿತಿಗಳಲ್ಲದೆ ಕೆಲವು ಕಡೆ ಕಟ್ಟಡ ಕಾರ್ಮಿಕ ಇಲಾಖೆ ವತಿಯಿಂದಲೂ ಸಹ ಕಾರ್ಮಿಕ ಇಲಾಖೆಯಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ. ಉಚಿತ ಹೊಲಿಗೆ ಯಂತ್ರ ಯೋಜನೆಗೆ ಬೇಕಾದ ಅಗತ್ಯ ದಾಖಲೆಗಳು : ಮಹಿಳೆಯರು ಕೇಂದ್ರ ಸರ್ಕಾರದ ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ವಯಸ್ಸಿನ ಪ್ರಮಾಣ ಪತ್ರ ,ಜಾತಿ ಪ್ರಮಾಣ ಪತ್ರ, ವಿಳಾಸ ಪುರಾವೆ, ಪರಿಚಯ ಪತ್ರ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಮಹಿಳೆಯರು ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ಪಡೆಯಲು ಹೊಂದಿರಬೇಕು.

ಅರ್ಜಿ ಸಲ್ಲಿಸುವ ವಿಧಾನ :

ಮಹಿಳೆಯರು ಕೇಂದ್ರ ಸರ್ಕಾರದ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವುದರ ಮೂಲಕ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಉಚಿತ ಹೊಲಿಗೆ ಯಂತ್ರ ಯೋಜನೆಯ ವೆಬ್ ಸೈಟ್ ನಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅದರಲ್ಲಿ ನಿಮ್ಮ ಹೆಸರು ವಿಳಾಸ ಹಾಗೂ ಕೆಲವೊಂದು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಅರ್ಜಿಯನ್ನು ಭರ್ತಿ ಮಾಡಿದ ನಂತರ ಮಹಿಳೆಯರು ತಮ್ಮ ಹತ್ತಿರದ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿ ಅಥವಾ ಹತ್ತಿರದ ಕಟ್ಟಡ ಕಾರ್ಮಿಕ ಇಲಾಖೆಗೆ ಭೇಟಿ ನೀಡುವುದರ ಮೂಲಕ ಈ ಯೋಜನೆಯ ಬಗ್ಗೆ ಆಗಾಗ ವಿಚಾರಿಸಿಕೊಳ್ಳುವುದರ ಮೂಲಕ ಕೇಂದ್ರ ಸರ್ಕಾರದ ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ.

ಇದನ್ನು ಓದಿ : ಕೇವಲ ಐದು ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲೇ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಿ, ಲಿಂಕ್‌ ಇಲ್ಲಿದೆ ನೋಡಿ

ಉಚಿತ ಹೊಲಿಗೆ ಯಂತ್ರ ಪ್ರಯೋಜನವನ್ನು ಪಡೆಯಲು ಇರುವ ಅರ್ಹತೆಗಳು :

ಕೇಂದ್ರ ಸರ್ಕಾರದ ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾದರೆ ಮಹಿಳೆಯರು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, ಮಹಿಳೆಯರ ವಯಸ್ಸು ಕನಿಷ್ಠ 18 ವರ್ಷ ಗರಿಷ್ಠ 40 ವರ್ಷಗಳ ಒಳಗೆ ಇರಬೇಕು. ಈ ಯೋಜನೆಯ ಲಾಭವನ್ನು ಪಡೆಯಬೇಕಾದರೆ ಬಡವರ್ಗದ ಮಹಿಳೆಯರು ಆಗಿರಬೇಕು. ಕುಟುಂಬದ ಆದಾಯವು ಯೋಜನೆಯ ಮಿತಿ ಮೀರಿರಬಾರದು. ದುರ್ಬಲ ವರ್ಗಕ್ಕೆ ಸೇರಿದಂತಹ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು. ಒಟ್ಟರೆ ಭಾರತ ದೇಶದಲ್ಲಿ ಪ್ರತಿ ರಾಜ್ಯದ 50,000 ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರದ ಯೋಜನೆಯ ಪ್ರಯೋಜನವನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಹೀಗೆ ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ಉಚಿತ ಹೊಲಿಗೆ ಯಂತ್ರಾದ ಯೋಜನೆಯನ್ನು ನೀಡಿದ್ದು, ಈ ಯೋಜನೆಯ ಮೂಲಕ ಮನೆಯಲ್ಲಿಯೇ ಕುಳಿತು ಕೆಲಸ ಮಾಡುವ ಮೂಲಕ ಮಹಿಳೆಯರು ತಮ್ಮ ಗುಣಮಟ್ಟದ ಜೀವನವನ್ನು ಹಾಗೂ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಬಹುದಾಗಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ಪುನರ್ ಆರಂಭ: ಸರ್ಕಾರದಿಂದ ವಿಐಎಸ್ಎಲ್ ಪುನರಾರಂಭಕ್ಕೆ ಚಾಲನೆ

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ: ಚಿನ್ನ ಖರೀದಿಸುವವರಿಗೆ ಇದೇ ಬೆಸ್ಟ್ ಟೈಮ್

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments