Saturday, July 27, 2024
HomeNewsಬಿಪಿಎಲ್ ಕಾರ್ಡ್ ವಿತರಣೆ : ಒಂದು ಮನೆಗೆ ಎಷ್ಟು ಕಾರ್ಡ್ ಸಿಗುತ್ತೆ ..?

ಬಿಪಿಎಲ್ ಕಾರ್ಡ್ ವಿತರಣೆ : ಒಂದು ಮನೆಗೆ ಎಷ್ಟು ಕಾರ್ಡ್ ಸಿಗುತ್ತೆ ..?

ನಮಸ್ಕಾರ ಸ್ನೇಹಿತರೆ, ಈಗಾಗಲೇ ಸುಮಾರು ನಮ್ಮ ಕರ್ನಾಟಕ ರಾಜ್ಯದಲ್ಲಿ ಒಂದು ಕೋಟಿ 28 ಲಕ್ಷ ರೇಷನ್ ಕಾರ್ಡ್ ಗಳು ಇರುವುದನ್ನು ಕಾಣಬಹುದಾಗಿದೆ. ಆದರೆ ಇವುಗಳಲ್ಲಿ ರಾಜ್ಯ ಸರ್ಕಾರವು ಈಗಾಗಲೇ ಐದರಿಂದ ಆರು ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದ್ದು ಬಿಪಿಎಲ್ ಕಾರ್ಡ್ ವಿಚಾರವಾಗಿ ರಾಜ್ಯ ಸರ್ಕಾರವು ಈಗಾಗಲೇ ಕೆಲವು ಹೊಸ ನಿಯಮಗಳನ್ನು ಹಾಗೂ ಕಂಡೀಶನ್ ಗಳನ್ನು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಹಾಗೂ ಹೊಸ ಬಿಪಿಎಲ್ ಕಾರ್ಡ್ ಪಡೆಯುವವರಿಗೆ ವಿಧಿಸಿದೆ. ಇವತ್ತಿನ ಲೇಖನದಲ್ಲಿ ನಿಮಗೆ ಹೊಸ ಬಿಪಿಎಲ್ ಕಾರ್ಡ್ ಪಡೆಯುವವರಿಗೆ ಅಥವಾ ಅರ್ಜಿ ಸಲ್ಲಿಸಿರುವವರಿಗೆ ಮತ್ತೊಂದು ಅವಕಾಶವನ್ನು ರಾಜ್ಯ ಸರ್ಕಾರ ನೀಡುತ್ತಿರುವುದರ ಬಗ್ಗೆ ತಿಳಿಸಲಾಗುತ್ತಿದೆ.

Issuance of BPL card
Issuance of BPL card
Join WhatsApp Group Join Telegram Group

ಹೊಸ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ :

ಇದೀಗ ಹೊಸ ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವವರಿಗೆ ಮತ್ತೊಂದು ಅವಕಾಶವನ್ನು ಕರ್ನಾಟಕ ರಾಜ್ಯ ಸರ್ಕಾರದಿಂದ ನೀಡಲಿದೆ. ಸದ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರವು ಚಾಲನೆ ನೀಡಿದ್ದು ಅದರಲ್ಲೂ ಕೆಲವು ಸಮಸ್ಯೆಗಳು ಉಂಟಾಗಿರುವುದನ್ನು ನಾವು ನೋಡಬಹುದಾಗಿದೆ. ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಕೆಲವು ಕ್ರಮಗಳನ್ನು ಜಾರಿಗೊಳಿಸುವುದರ ಮೂಲಕ ಅದರಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು ನಿರ್ಧರಿಸಿದೆ. ರಾಜ್ಯ ಸರ್ಕಾರದ ಈ ಕ್ರಮಗಳ ಪ್ರಕಾರ ಈಗಾಗಲೇ ರಾಜ್ಯದಲ್ಲಿ ಕೆಲವು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದ್ದು ಕಡ್ಡಾಯವಾಗಿ ರೇಷನ್ ಕಾರ್ಡ್ ಗಳನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿಸಲು ಆದೇಶ ನೀಡಿದೆ. ಇದರ ಮಧ್ಯೆ ರಾಜ್ಯ ಸರ್ಕಾರವು 2023 ನೇ ಸಾಲಿನ ಹೊಸ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ರಾಜ್ಯದ ಜನತೆಗೆ ಅವಕಾಶ ನೀಡಿದೆ.

ಹೊಸ ಬಿಪಿಎಲ್ ಕಾರ್ಡಿಗೆ ಅರ್ಜಿ ಆಹ್ವಾನ :

ಈಗಾಗಲೇ ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಹಲವಾರು ಕಂಡೀಶನ್ ಗಳನ್ನು ರಾಜ್ಯ ಸರ್ಕಾರವು ಜಾರಿ ಮಾಡಿದ್ದು ಆ ಕಂಡಿಶನ್ಗಳ ಪ್ರಕಾರ ಅಕ್ರಮವಾಗಿ ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಹೊಂದಿರುವವರ ರೇಷನ್ ಕಾರ್ಡ್ ಅನ್ನು ರದ್ದುಗೊಳಿಸಿದೆ. ಸೆಪ್ಟೆಂಬರ್ ಹತ್ತನೇ ದಿನಾಂಕದವರೆಗೆ ಆಧಾರ್ ಕಾರ್ಡ್ ನೊಂದಿಗೆ ರೇಷನ್ ಕಾರ್ಡ್ ಅನ್ನು ಲಿಂಕ್ ಮಾಡಿಸಲು ರಾಜ್ಯ ಸರ್ಕಾರವು ಅವಕಾಶ ನೀಡಿತ್ತು ಆದರೆ ಇದೀಗ ಸೆಪ್ಟೆಂಬರ್ 30ರವರೆಗೆ ರೇಷನ್ ಕಾರ್ಡ್ ನೊಂದಿಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ದಿನಾಂಕವನ್ನು ವಿಸ್ತರಿಸಿದೆ. ಅದರಂತೆ ಇದೀಗ ರಾಜ್ಯ ಸರ್ಕಾರವು ಈ ಎಲ್ಲಾ ಕಾರ್ಯಗಳು ಮುಗಿದ ನಂತರ ಹೊಸ ಬಿಪಿಎಲ್ ಕಾರ್ಡ್ಗೆ ಅರ್ಜಿ ಸಲ್ಲಿಸುವ ಅವರಿಗೂ ಸಹ ಒಂದು ಅವಕಾಶವನ್ನು ನೀಡಿದ್ದು ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇನ್ನೇನು ಕೆಲವೇ ದಿನಗಳಲ್ಲಿ ಅರ್ಜಿಯನ್ನು ಆಹ್ವಾನಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ :

ಈಗಾಗಲೇ ರಾಜ್ಯ ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಮಾಹಿತಿ ಹೊರ ಬಿದ್ದಿದ್ದು ಸೆಪ್ಟೆಂಬರ್ ಮೂರನೇ ವಾರದಲ್ಲಿ ಅರ್ಜಿಯನ್ನು ಹೊಸ ರೇಷನ್ ಕಾರ್ಡ್ ಗೆ ಸಲ್ಲಿಸಲು ಅವಕಾಶವನ್ನು ನೀಡಲಾಗುತ್ತದೆ. ಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸುವವರಿಗೆ ಕಡಿಮೆ ಕಾಲಾವಕಾಶವಿರುವುದನ್ನು ನೋಡಬಹುದಾಗಿತ್ತು. ರಾಜ್ಯದಲ್ಲಿ ಸುಮಾರು 80ರಷ್ಟು ಹಳೆಯ ಬಿಪಿಎಲ್ ಕಾರ್ಡ್ಗಳನ್ನು ಮಾಡಿದ್ದು ರಾಜ್ಯ ಸರ್ಕಾರವು 20 ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದೆ. ಬಿಪಿಎಲ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ನಿಮ್ಮ ಹತ್ತಿರದ ಸೇವ ಕೇಂದ್ರಕ್ಕೆ ಭೇಟಿ ನೀಡುವುದರ ಮೂಲಕ ಅಥವಾ ತಾಲೂಕು ಕಚೇರಿಯ ಆಹಾರ ಇಲಾಖೆಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಆಧಾರ್ ಕಾರ್ಡ್ನೊಂದಿಗೆ ಮಾಡಿಸಬಹುದು.

ಇದನ್ನು ಓದಿ : ನಾಳೆಯಿಂದ KSRTC ಬಸ್ಸಿನಲ್ಲಿ ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸುವಂತಿಲ್ಲ ,ಇಲ್ಲಿದೆ ಡಿಟೇಲ್ಸ್

ಅರ್ಜಿಯನ್ನು ಸಲ್ಲಿಸಲು ಅಗತ್ಯವಿರುವ ದಾಖಲೆಗಳು :

ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಯು ಹೊಂದಿರಬೇಕಾಗುತ್ತದೆ ಅವುಗಳೆಂದರೆ ಮನೆಯ ಎಲ್ಲಾ ಸದಸ್ಯರಾಡನ್ನು ಹೊಂದಿರಬೇಕು, 18 ವರ್ಷ ಮೇಲ್ಪಟ್ಟವರು ಮನೆಯಲ್ಲಿದ್ದರೆ ಅವರ ವೋಟರ್ ಐಡಿ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸದಸ್ಯರ ಫೋಟೋ, ಮೊಬೈಲ್ ನಂಬರ್ ವಾಸ ದೃಢೀಕರಣ ಪತ್ರ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅರ್ಜಿದಾರರು ಹೊಂದಿರಬೇಕು.

ಹೀಗೆ ಹೊಸದಾಗಿ ಬಿಪಿಎಲ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸುವವರಿಗೆ ರಾಜ್ಯ ಸರ್ಕಾರವು ಅವಕಾಶ ನೀಡಿದ್ದು ಈ ಮೂಲಕ ರಾಜ್ಯದಲ್ಲಿ ಹೊಸ ಬಿಪಿಎಲ್ ಕಾರ್ಡ್ ಅನ್ನು ಪಡೆಯಬಹುದಾಗಿದೆ. ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಅಥವಾ ಸಂಬಂಧಿಕರು ಯಾರಾದರೂ ಹೊಸ ಬಿಪಿಎಲ್ ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಲು ಕಾಯುತ್ತಿದ್ದಾರೆ ಅವರಿಗೆ ಇದನ್ನು ಶೇರ್ ಮಾಡುವ ಮೂಲಕ ರಾಜ್ಯ ಸರ್ಕಾರವು ಯಾವಾಗ ಹೊಸ ಬಿಪಿಎಲ್ ಕಾರ್ಡ್ಗೆ ಅರ್ಜಿಯನ್ನು ಆಹ್ವಾನಿಸುತ್ತದೆಯೋ ಆಗ ಅರ್ಜಿಯನ್ನು ಸಲ್ಲಿಸಲು ಅವಕಾಶ ದೊರೆತಂತಾಗುತ್ತದೆ ಧನ್ಯವಾದಗಳು.

ಇತರೆ ವಿಷಯಗಳು :

ಕ್ರೆಡಿಟ್ ಕಾರ್ಡ್ ಬೇಕಾ ಅಥವಾ ಬೇಡ್ವಾ..? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಐಫೋನ್ ಬೆಲೆಯಲ್ಲಿ ದಿಡೀರ್ ಕುಸಿತ : ಕಾರಣ ಏನು ಗೊತ್ತ..?

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments