Thursday, July 25, 2024
HomeScholarshipವಿದ್ಯಾರ್ಥಿಗಳಿಗೆ 2 ಲಕ್ಷದವರೆಗೆ ವಿದ್ಯಾರ್ಥಿವೇತನ : ಯಾರು ಮಿಸ್ ಮಾಡ್ಕೋಬೇಡಿ ಅರ್ಜಿ ಹಾಕಿ

ವಿದ್ಯಾರ್ಥಿಗಳಿಗೆ 2 ಲಕ್ಷದವರೆಗೆ ವಿದ್ಯಾರ್ಥಿವೇತನ : ಯಾರು ಮಿಸ್ ಮಾಡ್ಕೋಬೇಡಿ ಅರ್ಜಿ ಹಾಕಿ

ನಮಸ್ಕಾರ ಸ್ನೇಹಿತರೆ, ವಿದ್ಯಾರ್ಥಿಗಳಿಗಾಗಿ ಸರ್ಕಾರವು ಹಾಗೂ ಅನೇಕ ಫೌಂಡೇಶನ್ ಗಳು ವಿದ್ಯಾರ್ಥಿವೇತನವನ್ನು ಕಾಲಕಾಲಕ್ಕೆ ನೀಡುತ್ತಲೇ ಇದೆ. ಅದರಂತೆ ಇವತ್ತಿನ ಲೇಖನದಲ್ಲಿ ನಿಮಗೆ ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ ಬಗ್ಗೆ ತಿಳಿಸಲಾಗುತ್ತಿದೆ. ಸುಮಾರು 5000 ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ ಗೆ ಅಂಡರ್ ಗ್ರಾಜುಯೇಟ್ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹಾಗಾದರೆ ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸಬೇಕು ಹಾಗೂ ಈ ಯೋಜನೆಯಡಿಯಲ್ಲಿ ಎಷ್ಟು ಹಣವನ್ನು ಪಡೆಯಬಹುದಾಗಿದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.

Reliance Foundation Scholarship
Reliance Foundation Scholarship
Join WhatsApp Group Join Telegram Group

ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ :

ಅಂಡರ್ ಗ್ರಾಜುಯೇಟ್ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲ ಮಾಡುವ ಉದ್ದೇಶದಿಂದ ರಿಲೈನ್ಸ್ ಫೌಂಡೇಶನ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಕಳೆದ 25 ವರ್ಷಗಳಿಂದ ರಿಲಯನ್ಸ್ ಕಂಪನಿಯು ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ ಅನ್ನು ನೀಡುತ್ತಿದೆ. ಇದೀಗ ಅಂಡರ್ ಗ್ರಾಜುಯೇಟ್ ಪ್ರೋಗ್ರಾಮ್ ಗಳಿಗೆ 2023 -24 ನೇ ಸಾಲಿನಲ್ಲಿ ಪ್ರವೇಶ ಪಡೆದಿರುವಂತಹ ವಿದ್ಯಾರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿ ವೇತನವನ್ನು ಸಮಾಜದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಪಡೆಯಬಹುದಾಗಿದೆ.

ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ ನ ಅರ್ಹತೆಗಳು :

ಸಮಾಜದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಈ ವಿದ್ಯಾರ್ಥಿ ವೇತನವನ್ನು ರಿಲಯನ್ಸ್ ಕಂಪನಿಯು ನೀಡುತ್ತಿದ್ದು ಇದಕ್ಕೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳೆಂದರೆ, ಅಭ್ಯರ್ಥಿಯು ಭಾರತೀಯ ವಿದ್ಯಾರ್ಥಿಗಳ ಆಗಿರಬೇಕು. ದ್ವಿತೀಯ ಪಿಯುಸಿ ಯನ್ನು ಶೇಕಡಾ 60 ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು ಡಿಗ್ರಿ ಕೋರ್ಸ್ ಗಳಿಗೆ ರೆಗುಲರ್ ತರಗತಿ ಪ್ರವೇಶ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಮೊದಲ ಆದ್ಯತೆಯನ್ನು ರಿಲಯನ್ಸ್ ಕಂಪನಿಯು ನೀಡಿದೆ. ಆಯ್ಕೆ ಮಾಡುವ ವಿಧಾನ : ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನಕ್ಕೆ ಆಪ್ಟಿಟ್ಯೂಡ್ ಟೆಸ್ಟ್ ಮೂಲಕ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ :

ರಿಲಯನ್ಸ್ ಕಂಪನಿಯು ನೀಡುತ್ತಿರುವ ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು 2023 ಅಕ್ಟೋಬರ್ 15 ಕೊನೆಯ ದಿನಾಂಕವಾಗಿದೆ.

ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ನ ಮೊತ್ತ :

ಸುಮಾರು 2 ಲಕ್ಷ ರೂಪಾಯಿಗಳನ್ನು ಸಂಪೂರ್ಣ ಪದವಿ ಮುಗಿಯುವವರೆಗೆ ವಿದ್ಯಾರ್ಥಿಗಳು ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ನ ಅಡಿಯಲ್ಲಿ ಪಡೆಯಬಹುದಾಗಿದೆ.

ಅರ್ಜಿಯನ್ನು ಯಾರು ಸಲ್ಲಿಸುವಂತಿಲ್ಲ :

ಎರಡನೇ ವರ್ಷದಲ್ಲಿ ಅಥವಾ ಮೂರನೇ ವರ್ಷದಲ್ಲಿ ಪದವಿಯನ್ನು ಓದುತ್ತಿರುವವರು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವಂತಿಲ್ಲ. ಆನ್ಲೈನ್ ಮೂಲಕ ದೂರ ಶಿಕ್ಷಣದ ಮೂಲಕ ಅಥವಾ ಪೂರ್ಣಾವಧಿ ಹೊರತುಪಡಿಸಿ ಇತರೆ ಯಾವುದೇ ಮಾರ್ಗದಲ್ಲಿ ಡಿಗ್ರಿ ಓದುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿರುವುದಿಲ್ಲ. ಎಸ್ ಎಸ್ ಎಲ್ ಸಿ ನಂತರ ಡಿಪ್ಲೋಮೋ ಓದಿದಂತಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸುವಂತಿಲ್ಲ.

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :

ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ, ಪಾಸ್ಪೋರ್ಟ್ ಸೈಜ್ ಫೋಟೋ, ವಿಳಾಸದ ಗುರುತಿನ ಚೀಟಿ, ಪ್ರಸ್ತುತ ಪ್ರಥಮ ವರ್ಷದ ಡಿಗ್ರಿಗೆ ಪ್ರವೇಶ ಪಡೆದಿರುವ ದಾಖಲೆ, sslc ದ್ವಿತೀಯ ಪಿಯುಸಿ ಅಂಕಪಟ್ಟಿ ,ಆದಾಯ ಪ್ರಮಾಣ ಪತ್ರ ಹಾಗೂ ಅಂಗವಿಕಲರಾಗಿದ್ದರೆ ಅಂಗವಿಕಲ ಪ್ರಮಾಣ ಪತ್ರ.

ಇದನ್ನು ಓದಿ : ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ; ದಿಢೀರನೆ ಬೇಳೆಕಾಳುಗಳ ಬೆಲೆ ಭಾರಿ ಹೆಚ್ಚಳ…! ಇಂದಿನ ಬೆಲೆ ಕೇಳಿದ್ರೆ ಶಾಕ್‌

ಅರ್ಜಿ ಸಲ್ಲಿಸುವ ವಿಧಾನ :

ಅರ್ಜಿಯನ್ನು ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಸಲ್ಲಿಸಬಹುದಾಗಿದೆ.

ರಿಲಯನ್ಸ್ ಕಂಪನಿಯು ಆರ್ಥಿಕವಾಗಿ ದುರ್ಬಲವಾಗಿರುವ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗಾಗಿ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು ಈ ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳು ತಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದು. ಹೀಗೆ ಈ ವಿದ್ಯಾರ್ಥಿ ವೇತನವನ್ನು ಆರ್ಥಿಕವಾಗಿ ಹಿಂದುಳಿದಂತಹ ವಿದ್ಯಾರ್ಥಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರು ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ ಅನ್ನು ಪಡೆಯಲು ಸಹಾಯ ಮಾಡಿದ ಧನ್ಯವಾದಗಳು.

ಇತರೆ ವಿಷಯಗಳು :

ನೌಕರರಿಗೆ ಮೂಲ ವೇತನ ಹೆಚ್ಚಳ.! ಡಬಲ್‌ ಆಯ್ತು ಉದ್ಯೋಗಿಗಳ ಆದಾಯ.! ಈ ಎಲ್ಲ ಭತ್ಯೆಗಳು 4% ಹೆಚ್ಚಳ

ಗೃಹಲಕ್ಷ್ಮಿಯರಿಗೆ 3 ಶರತ್ತುಗಳು : ಹಣ ಪಡೆದುಕೊಂಡವರಿಗೂ ಸಹ ಅನ್ವಯ, ಮುಂದಿನ ತಿಂಗಳು ಹಣ ಬೇಕಾದರೆ ಈ ಕೆಲಸ ಮಾಡಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments