Thursday, July 25, 2024
HomeNewsRain Alert: ರೈತರಿಗೆ ಸಿಹಿ ಸುದ್ದಿ ಕೊಟ್ಟ ಹವಾಮಾನ ಇಲಾಖೆ; ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ...

Rain Alert: ರೈತರಿಗೆ ಸಿಹಿ ಸುದ್ದಿ ಕೊಟ್ಟ ಹವಾಮಾನ ಇಲಾಖೆ; ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ವರುಣನ ಅಬ್ಬರ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ಮಳೆ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ, ರೈತರಿಗೆ ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟ ಹವಾಮಾನ ಇಲಾಖೇ. ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ 3 ದಿನ ವರುಣನ ಅಬ್ಬರ ಶುರುವಾಗಲಿದೆ. ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಯಾವ್ಯಾವ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ನಾವು ನಿಮಗೆ ಈ ಲೇಖನದಲ್ಲಿ ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ.

Rain Alert
Join WhatsApp Group Join Telegram Group

ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ 8 ಗಂಟೆಯವರೆಗೆ 18 ಮಿಮೀ ಮಳೆ ದಾಖಲಾಗಿದ್ದು, ನಗರದ ಹಲವೆಡೆ ನೀರು ನಿಂತಿದ್ದು, ಮರಗಳು ಧರೆಗುರುಳಿವೆ. ಮಂಗಳವಾರ ಸುರಿದ ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ಜಲಾವೃತಗೊಂಡು ಸಂಚಾರ ದಟ್ಟಣೆ ಉಂಟಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ನಗರದಲ್ಲಿ ರಾತ್ರಿ 8 ಗಂಟೆಯವರೆಗೆ 18 ಮಿಮೀ ಮತ್ತು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 15 ಮಿಮೀ ಮಳೆ ದಾಖಲಾಗಿದೆ.

ಮಂಗಳವಾರ ಸುರಿದ ಭಾರಿ ಮಳೆಗೆ ನಗರದ ವಿವಿಧೆಡೆ ನಾಲ್ಕು ಮರಗಳು ಧರೆಗುರುಳಿವೆ. ಜೆ.ಪಿ.ನಗರ, ರಾಜರಾಜೇಶ್ವರಿನಗರ, ಎಚ್‌ಎಎಲ್‌ 2ನೇ ಹಂತದಲ್ಲಿ ಮರಗಳು ಧರೆಗುರುಳಿದ್ದು, ಮಲ್ಲೇಶ್ವರದ ಕೆಸಿ ಜನರಲ್‌ ಆಸ್ಪತ್ರೆ ಬಳಿ ಮತ್ತೊಂದು ಮರ ಧರೆಗುರುಳಿದ್ದು, ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಹಾನಿಯಾಗಿದೆ.

ಇದನ್ನೂ ಸಹ ಓದಿ: ಪುರುಷರು ಬಸ್ಸಿನಲ್ಲಿ ಹಣ ಕೊಡುವ ಅಗತ್ಯವಿಲ್ಲ: ಪುರುಷರಿಗಾಗಿ ಸರ್ಕಾರದಿಂದ ಹೊಸ ಯೋಜನೆ ಜಾರಿ

ಮಂಗಳವಾರ ಥಣಿಸಂದ್ರ, ಜೆಪಿ ನಗರ ಸೇರಿದಂತೆ ನಗರದ ಹಲವು ರಸ್ತೆಗಳು ಜಲಾವೃತಗೊಂಡಿವೆ.

IMD ಅಂಕಿಅಂಶಗಳ ಪ್ರಕಾರ ಕಲಬುರಗಿ ಮತ್ತು ಬೀದರ್‌ನ ಸೇಡಂ ಕ್ರಮವಾಗಿ 8cm ಮತ್ತು 6cm ಮತ್ತು ಉಡುಪಿ ಮತ್ತು ಚಿಂಚೋಳಿಯಲ್ಲಿ 5 cm ಮಳೆ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಬಗ್ಗೆ IMD ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ 8 ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ, ಉತ್ತರ ಒಳನಾಡಿನ ಕರ್ನಾಟಕದ ಹಲವು ಭಾಗಗಳಲ್ಲಿ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇತರೆ ವಿಷಯಗಳು :

ಶಾಲೆಗೆ ರಜೆ: 1ರಿಂದ 12ರವರೆಗೆ ಶಾಲಾ ವಿದ್ಯಾರ್ಥಿಗಳಿಗೆ ರಜೆಯೋ ರಜೆ, ಇಷ್ಟು ದಿನ ರಜೆ ಯಾಕೆ ಗೊತ್ತೇ.?

KSRTC ಟಿಕೆಟ್‌ ಬುಕ್ಕಿಂಗ್‌ ಈಗ ಇನ್ನಷ್ಟು ಸುಲಭ; ಸರ್ಕಾರದಿಂದ ಹೊಸ ಆ್ಯಪ್‌ ಬಿಡುಗಡೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments